ADVERTISEMENT

ಗೋಮಾಳದ ದಾಖಲಾತಿ ಬದಲಿಸಿ ವಂಚನೆ: ಮೂರು ಕಡೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 7:31 IST
Last Updated 13 ಜನವರಿ 2021, 7:31 IST
   

ಬೆಂಗಳೂರು: ಬೆಂಗಳೂರು ಉತ್ತರ ಹೆಚ್ಚುವರಿ (ಯಲಹಂಕ) ತಾಲ್ಲೂಕಿನ ಚಿಕ್ಕಬೆಟ್ಟಹಳ್ಳಿ ಗ್ರಾಮದ ಗೋಮಾಳ ಜಮೀನಿನ ದಾಖಲೆ‌ ಬದಲಾವಣೆ ಮಾಡಿ ಖಾಸಗಿ ಬಿಲ್ಡರ್ ಗಳಿಗೆ ಅನುಕೂಲ ಮಾಡಿಕೊಟ್ಟ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ), ಬೆಂಗಳೂರು ಮತ್ತು ತುಮಕೂರಿನ ಮೂರು ಕಡೆ ದಾಳಿ ಮಾಡಿ, ಶೋಧ ನಡೆಸುತ್ತಿದೆ.

ಯಲಹಂಕ ತಾಲ್ಲೂಕು ಕಚೇರಿಯ ಕಂದಾಯ ನಿರೀಕ್ಷಕಿ ಬಿ.ಕೆ. ಆಶಾ ಅವರ ಅನ್ನಪೂರ್ಣೇಶ್ವರಿ ನಗರದ ಆರೋಗ್ಯ ಬಡಾವಣೆಯ ಮನೆ, ಶಿರಸ್ತೇದಾರ್ ಪಿ.ಎಸ್.ಆರ್. ಪ್ರಸಾದ್ ಅವರ ತುಮಕೂರಿನ ಮನೆ ಮತ್ತು ಖಾಸಗಿ ಬಿಲ್ಡರ್ ಕೆ.ವಿ. ನಾಯ್ಡು ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮನೆಗಳ ಮೇಲ ಎಸಿಬಿ ದಾಳಿ ನಡೆದಿದೆ.

ಗೋಮಾಳ ಜಮೀನನ್ನು 1968ರಿಂದಲೂ ಸಾಗುವಳಿ ಮಾಡುತ್ತಿರುವ ಜನರಿಗೆ ಖಾತೆ ಮಾಡಿಕೊಟ್ಟಲ್ಲ. ಖಾಸಗಿ ಬಿಲ್ಡರ್ ಗಳ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದರು ಎಂದು ಖಾಸಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸಿಬಿ ಬೆಂಗಳೂರು ನಗರ ಘಟಕದ ಎಸ್ ಪಿ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.