ADVERTISEMENT

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ, ಪ್ರವೇಶ ದ್ವಾರಗಳನ್ನು ಮುಚ್ಚಿ ಶೋಧ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 14:23 IST
Last Updated 19 ನವೆಂಬರ್ 2021, 14:23 IST
ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ, ಪ್ರವೇಶ ದ್ವಾರಗಳನ್ನು ಮುಚ್ಚಿ ಶೋಧ
ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ, ಪ್ರವೇಶ ದ್ವಾರಗಳನ್ನು ಮುಚ್ಚಿ ಶೋಧ   

ಬೆಂಗಳೂರು: ಭಾರಿ ಪ್ರಮಾಣದ ಅವ್ಯವಹಾರ ಮತ್ತು ಭ್ರಷ್ಟಾಚಾರ ನಡೆಯುತ್ತಿರುವ ದೂರುಗಳನ್ನು ಆಧರಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿ ಮೇಲೆ ದಾಳಿಮಾಡಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ಮೂವರು ಎಸ್‌ಪಿಗಳು, ಐವರು ಡಿವೈಎಸ್‌ಪಿಗಳು, 12 ಇನ್‌ಸ್ಪೆಕ್ಟರ್‌ಗಳು, 50 ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಡಿಎ ಕಚೇರಿಯ ಎಲ್ಲ ಪ್ರವೇಶ ದ್ವಾರಗಳನ್ನೂ ಬಂದ್‌ ಮಾಡಿ, ಮೊಹರು ಹಾಕಲಾಗಿದೆ. ಕಚೇರಿಯ ಆವರಣದಲ್ಲಿರುವ ಸಾರ್ವಜನಿಕರನ್ನೂ ತಪಾಸಣೆ ಮಾಡಲಾಗುತ್ತಿದೆ.

ನಿವೇಶನ ಹಂಚಿಕೆ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿರುವ ಕುರಿತು ಎಸಿಬಿ ಕಚೇರಿಗೆ ದೂರುಗಳು ಬಂದಿದ್ದವು. ಈ ದೂರುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳ ಕಚೇರಿಗಳು, ವಿವಿಧ ಆಡಳಿತ ಕಚೇರಿಗಳಲ್ಲಿ ಶೋಧ ನಡೆಯುತ್ತದೆ. ಕೆಲವು ಕಚೇರಿಗಳಲ್ಲಿ ನಗದು ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.