ADVERTISEMENT

ಚಿತ್ರಗಳು: ಕೋರಮಂಗಲದ ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ, ಹಣ ವಶ

ಭ್ರಷ್ಟಾಚಾರ ಆರೋಪದ‌ ಮೇಲೆ‌ ಕೋರಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದಾರೆ. ಕಚೇರಿಯಲ್ಲಿ ಬೃಹತ್ ಪ್ರಮಾಣದ ಲಂಚದ ವಹಿವಾಟು ನಡೆಯುತ್ತಿರುವ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೃಹತ್ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ. ಕಚೇರಿಯೊಳಗಿದ್ದ ಖಾಸಗಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 13:58 IST
Last Updated 11 ಡಿಸೆಂಬರ್ 2020, 13:58 IST
ಕೋರಮಂಗಲದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ
ಕೋರಮಂಗಲದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ   
ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ವಶಪಡಿಸಿಕೊಂಡ ಹಣ
ಹಣದ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು
ಏಜೆಂಟ್ ಶಾಪ್‌ನಲ್ಲಿ ಮೂಲ ಆರ್‌ಟಿಓ ದಾಖಲೆಗಳು ವಶ
ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.