ADVERTISEMENT

ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 3:00 IST
Last Updated 22 ಅಕ್ಟೋಬರ್ 2020, 3:00 IST
ಎಸಿಬಿ
ಎಸಿಬಿ   

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಸಹಾಯಕ ಕಾರ್ಯದರ್ಶಿ ಹರೀಶ್‌ ಅವರ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ನೃಪತುಂಗ ರಸ್ತೆಯಲ್ಲಿನ ಇವರ ಕಚೇರಿ, ಹುಬ್ಬಳ್ಳಿಯ ಕೋಟಿಲಿಂಗ ನಗರದಲ್ಲಿರುವ ವಾಸದ ಮನೆ, ಸ್ನೇಹಿತನ ಮನೆ, ಬೆಂಗಳೂರಿನ ಯಲಹಂಕದಲ್ಲಿರುವ ಅಳಿಯನ ಮನೆ ಮೇಲೆ ದಾಳಿ ನಡೆಸಲಾಗಿದೆ.

ಅಕ್ರಮ ಆಸ್ತಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಶೋಧ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.