ADVERTISEMENT

ಅಪಘಾತ; ವೈದ್ಯಕೀಯ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 19:56 IST
Last Updated 6 ಫೆಬ್ರುವರಿ 2021, 19:56 IST

ಬೆಂಗಳೂರು:‍ ‍ಪುಲಿಕೇಶಿನಗರ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ವೈದ್ಯಕೀಯ ವಿದ್ಯಾರ್ಥಿನಿ ಸಸ್ತಿಕಾ ಬುರ್ಷಾ (19) ಎಂಬುವರು ಮೃತಪಟ್ಟಿದ್ದಾರೆ.

‘ಲಿಂಗರಾಜುಪುರ ನಿವಾಸಿಯಾದ ಸಸ್ತಿಕಾ, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಹೆಣ್ಣೂರು ಮುಖ್ಯರಸ್ತೆ ಮೂಲಕ ಲಿಂಗರಾಜುಪುರದತ್ತ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗಲೇ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ಲಿಂಗರಾಜಪುರ ಬಳಿ ಬಿಬಿಎಂಪಿಯ ಮಿನಿ ಟ್ರಕ್, ಸಸ್ತಿಕಾ ಅವರ ದ್ವಿಚಕ್ರ ವಾಹನಕ್ಕೆ ಗುದ್ದಿತ್ತು. ತೀವ್ರ ಗಾಯಗೊಂಡ ಸಸ್ತಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.