ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸಂಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್‌ನಲ್ಲಿ ಮಂಗಳವಾರ ರಾತ್ರಿ ಸ್ಕೂಟರ್ ಹಾಗೂ ಸಿಮೆಂಟ್ ಮಿಶ್ರಣದ ಲಾರಿ ನಡುವೆ ಸಂಭವಿಸಿದ ಅಪಘಾತ ದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮತ್ತಿಕೆರೆಯ ಬಿ.ಕೆ.ನಗರದ ನಿವಾಸಿ ಆಯುಷಾ ಖಾನಂ (30) ಮೃತಪಟ್ಟ ಉದ್ಯೋಗಿ.
ಹೊರವರ್ತುಲ ರಸ್ತೆಯ ಭದ್ರಪ್ಪ ಲೇಔಟ್ ಬಸ್ ನಿಲ್ದಾಣ ಸಮೀಪ ಅಪಘಾತ ನಡೆಯಿತು. ಆಯುಷಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನ ಚಾಲಕನ ಒಡಿಶಾ ಮೂಲದ ದಿಲೀಪ್ ಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.