ADVERTISEMENT

ರಾಜಾಜಿನಗರ | ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:31 IST
Last Updated 23 ಏಪ್ರಿಲ್ 2025, 15:31 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜಾಜಿನಗರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಕೂಲಿನಗರದಲ್ಲಿ ಬೈಕ್‌ವೊಂದು ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಲಗ್ಗೆರೆ ಚೌಡೇಶ್ವರಿನಗರ ನಿವಾಸಿ ನಿತಿನ್(24) ಮೃತ ಸವಾರ. ಹಿಂಬದಿ ಸವಾರ ಹೃದಯ್(24) ಗಾಯಗೊಂಡಿದ್ದಾರೆ. ಹೃದಯ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು. ಬುಧವಾರ ಮುಂಜಾನೆ ಹೊರವರ್ತುಲ ರಸ್ತೆಯ ಕೂಲಿನಗರದ ಸೇತುವೆ ಬಳಿ ಈ ಘಟನೆ ನಡೆದಿದೆ.

ಸವಾರ ನಿತಿನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹಿತ ಹೃದಯ್ ಹೂವಿನ ಅಲಂಕಾರದ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಎಡಭಾಗದ ಪಾದಾಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ನಿತಿನ್ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಹೃದಯ್‌ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ದ್ವಿಚಕ್ರ ವಾಹನವನ್ನು ಅತಿವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಅಪಘಾತವಾಗಿರುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.