ADVERTISEMENT

ಅಪಘಾತ: ಫುಡ್ ಡೆಲಿವರಿ ಬಾಯ್‌ ಸಾವು

​ಪ್ರಜಾವಾಣಿ ವಾರ್ತೆ
Published 29 ಮೇ 2024, 15:53 IST
Last Updated 29 ಮೇ 2024, 15:53 IST
<div class="paragraphs"><p>ಡೆಲಿವರಿ ಬಾಯ್‌ </p></div>

ಡೆಲಿವರಿ ಬಾಯ್‌

   

ಸಾಂಕೇತಿಕ ಚಿತ್ರ

ಬೆಂಗಳೂರು: ಮೈಸೂರು ರಸ್ತೆಯ ಗುಡ್ಡದಹಳ್ಳಿಯ ಭಾಗ್ಯಲಕ್ಷ್ಮಿ ಗೋದಾಮು ಬಳಿ ಪೆಟ್ರೋಲ್‌ ತುಂಬಿದ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಫುಡ್‌ ಡೆಲಿವರಿ ಬಾಯ್‌, ರಾಜರಾಜೇಶ್ವರಿ ನಗರದ ನಿವಾಸಿ ಕಿಶೋರ್‌ (50) ಅವರು ಮೃತಪಟ್ಟಿದ್ದಾರೆ.

ADVERTISEMENT

‘ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಫುಡ್‌ ಡೆಲಿವರಿ ಮಾಡಲು ಕಿಶೋರ್‌ ಬೈಕ್‌ನಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಎದುರಿನಿಂದ ಅತಿವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್‌ ಸವಾರ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳದಲ್ಲಿದ್ದವರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ’ ಎಂದು ಮೂಲಗಳು ಹೇಳಿವೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.