ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮೈಕೊ ಲೇಔಟ್ ಸಂಚಾರ ಠಾಣೆ ವ್ಯಾಾಪ್ತಿಯಲ್ಲಿ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಲಾರಿ ಚಕ್ರ ಕಾಲುಗಳ ಮೇಲೆ ಹರಿದು ಮಹೇಶ್ (32) ಅವರು ಮೃತಪಟ್ಟಿದ್ದಾರೆ.
ಮೂಡಿಗೆರೆಯ ಮಹೇಶ್, ವರ್ತೂರು ಬಳಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
‘ಮಹೇಶ್ ಅವರು ತಡರಾತ್ರಿ ಡೇರಿ ವೃತ್ತದಿಂದ ಮಡಿವಾಳ ಕಡೆ ಬೈಕ್‌ನಲ್ಲಿ ಹೋಗುತ್ತಿದ್ದರು. ಕ್ರೈಸ್ಟ್ ವಿಶ್ವವಿದ್ಯಾಲಯ ಎದುರು ರಸ್ತೆಯಲ್ಲಿ ನಿಂತಿದ್ದ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಮಹೇಶ್ ರಸ್ತೆಯಲ್ಲಿ ಬಿದ್ದಿದ್ದರು. ಇದೇ ಮಾರ್ಗವಾಗಿ ಹೊರಟಿದ್ದ ಮತ್ತೊಂದು ಲಾರಿಯ ಚಕ್ರಗಳು, ಮಹೇಶ್ ಕಾಲುಗಳ ಮೇಲೆ ಹರಿದಿದ್ದವು. ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.