
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸೈಕಲ್‌ನಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವಾಟರ್ ಟ್ಯಾಂಕರ್ ವಾಹನವೊಂದು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೇಪಾಳ ಮೂಲದ ಜಾನಕಿ (30) ಮೃತಪಟ್ಟವರು.
ಇವರ ಪತಿ ಸೆಕ್ಯೂರಿಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ, ಓ ಫಾರಂ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು ಹೇಳಿದರು.
‘ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ಹೌಸ್ ಕೀಪಿಂಗ್ ಕೆಲಸಕ್ಕೆ ತೆರಳುತ್ತಿದ್ದರು. ವೈಟ್‌ಫೀಲ್ಡ್ ಮುಖ್ಯರಸ್ತೆಯ ಪ್ರೆಸ್ಟೀಜ್ ವೈಟ್ ಮಿಡೋಸ್ ಅಪಾರ್ಟ್‌ಮೆಂಟ್‌ನ ಎದುರು, ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ತಿಳಿಸಿದರು.
ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.