ADVERTISEMENT

ಸರಣಿ ಅಪಘಾತ: 9 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 17:50 IST
Last Updated 27 ಡಿಸೆಂಬರ್ 2020, 17:50 IST

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬ್ಯಾಟರಾಯನಪುರ ಮೇಲ್ಸೇತುವೆ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿತು.

ಬೆಂಗಳೂರು ಕಡೆಗೆ ವೇಗವಾಗಿ ಬಂದ ಕಾರೊಂದು, ನಿಯಂತ್ರಣ ಕಳೆದುಕೊಂಡಿದ್ದರಿಂದ ವಿಭಜಕ ಹಾರಿ, ಎದುರು ಮಾರ್ಗದಲ್ಲಿ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಹಿಂಬದಿಯಲ್ಲಿ ಬರುತ್ತಿದ್ದ ಮೂರು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.

ಘಟನೆಯಲ್ಲಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಪಘಾತದಿಂದ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆಯಾಗಿತ್ತು. ಸ್ಥಳಕ್ಕೆ ಹೆಬ್ಬಾಳ ಪೊಲೀಸರು ಭೇಟಿ ನೀಡಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.