ಪ್ರಜಾವಾಣಿ ಚಿತ್ರ
ಬೆಂಗಳೂರು: ಬೊಮ್ಮನಹಳ್ಳಿ ಜಂಕ್ಷನ್ ಬಳಿ ಸೋಮವಾರ ಬೆಳಿಗ್ಗೆ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕೂಡ್ಲು ನಿವಾಸಿ ವೇಣುಗೋಪಾಲ್(53) ಮೃತರು. ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಬೊಮ್ಮನಹಳ್ಳಿ ಜಂಕ್ಷನ್ ಬಳಿ ದುರ್ಘಟನೆ ನಡೆದಿದೆ.
ಸೀರೆ ವ್ಯಾಪಾರಿ ವೇಣುಗೋಪಾಲ್ ಅವರು ಬೈಕ್‌ನಲ್ಲಿ ಬೊಮ್ಮನಹಳ್ಳಿ ಜಂಕ್ಷನ್ ಕಡೆಯಿಂದ ಮಡಿವಾಳ ಕಡೆಗೆ ತೆರಳುತ್ತಿದ್ದರು. ಮೆಟ್ರೊ ಪಿಲ್ಲರ್ ನಂ. 232ರ ಬಳಿ, ಹಿಂಬದಿಯಿಂದ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ವೇಣುಗೋಪಾಲ್ ಮೇಲೆ ಟಿಪ್ಪರ್ ಲಾರಿ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಚಾಲಕ ಚೆಲುವೇಗೌಡ(35) ಎಂಬಾತನನ್ನು ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.