ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಲೋಕೇಶ್ (45) ಮೃತಪಟ್ಟವರು.
‘ತುಮಕೂರು ಜಿಲ್ಲೆಯವರಾದ ಲೋಕೇಶ್ ಅವರು, ಕೋರಮಂಗಲದ ವೆಂಕಟಾಪುರದಲ್ಲಿ ನೆಲೆಸಿದ್ದರು. ವ್ಯಾಪಾರ ವೃತ್ತಿ ಮಾಡುತ್ತಿದ್ದರು. ಕೆಲಸದ ನಿಮಿತ್ತ ಹೆಬ್ಬಾಳಕ್ಕೆ ಬುಧವಾರ ರಾತ್ರಿ ತೆರಳುತ್ತಿದ್ದರು. ಆಗ ನಡೆದ ಅಪಘಾತದಲ್ಲಿ ಮೃತಪಟ್ಟಿದ್ಧಾರೆ’ ಎಂದು ಪೊಲೀಸರು ಹೇಳಿದರು
‘ಮೇಲ್ಸೇತುವೆಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಟೆಂಪೊವೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕೆಳಕ್ಕೆ ಬಿದ್ದ ಲೋಕೇಶ್ ಅವರ ಮೇಲೆಯೇ ವಾಹನದ ಚಕ್ರ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ಧಾರೆ’ ಎಂದು ಪೊಲೀಸರು ಹೇಳಿದರು.
‘ಚಾಲಕ ವಾಹನ ನಿಲುಗಡೆ ಮಾಡದೇ ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಸಿಸಿ ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.