ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮಾಗಡಿ ಮುಖ್ಯರಸ್ತೆಯಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಪ್ರವೀಣ್ (19) ಎಂಬುವರು ಮೃತಪಟ್ಟಿದ್ದಾರೆ.
ಪ್ರವೀಣ್ ಅವರು ಮಾಗಡಿ ಮುಖ್ಯ ರಸ್ತೆಯ 9ನೇ ಅಡ್ಡರಸ್ತೆಯ ನಿವಾಸಿ. ಇವರ ತಂದೆ ಬಟ್ಟೆ ವ್ಯಾಪಾರ ನಡೆಸುತ್ತಿದ್ದಾರೆ. ಅದೇ ಅಂಗಡಿಯಲ್ಲಿ ಪ್ರವೀಣ್ ಅವರು ಕೆಲಸ ಮಾಡುತ್ತಿದ್ದರು. ವಿದ್ಯುತ್ ಚಾಲಿತ ದ್ವಿಚಕ್ರ ವಾಹನದಲ್ಲಿ ಬಟ್ಟೆ ಅಂಗಡಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಹೋಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಪ್ರವೀಣ್, ಹೆಲ್ಮೆಟ್ ಧರಿಸಿರಲಿಲ್ಲ. ಸರಕು ಸಾಗಣೆ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.