ADVERTISEMENT

ಬೆಂಗಳೂರು: ಬೈಕ್‌ನಿಂದ ಬಿದ್ದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 15 ಮೇ 2025, 23:19 IST
Last Updated 15 ಮೇ 2025, 23:19 IST
<div class="paragraphs"><p>ಮಹಿಳೆ ಸಾವು</p></div>

ಮಹಿಳೆ ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳದ ಸಮೀಪದ ಬೈಕ್‌ನಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಉಲ್ಲಾಳ ಸಮೀಪದ ಶಿರ್ಕೆ ನಿವಾಸಿ ಕೀರ್ತಿ(25) ಮೃತ ಕಾರ್ಮಿಕ.

ಕೀರ್ತಿ ಮನೆ ಸಮೀಪದಲ್ಲಿದ್ದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ 9.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಉಲ್ಲಾಳ ಜಂಕ್ಷನ್‌ನಿಂದ ಮರಿಯಪ್ಪನ ಪಾಳ್ಯ ಜಂಕ್ಷನ್ ಕಡೆಗೆ ಹೋಗುವಾಗ ಪಿವಿಸಿ ಶಾಲೆ ಬಳಿ ಬೈಕ್ ನಿಯಂತ್ರಣ ತಪ್ಪಿದ್ದರಿಂದ ಕೆಳಕ್ಕೆ ಬಿದ್ದಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮಳೆ ಸುರಿಯುತ್ತಿದ್ದರೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.