ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮಹದೇವಪುರ ಹಾಗೂ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮಹದೇವಪುರದ ಐಟಿಪಿಎಲ್ ರಸ್ತೆಯ ಕಂಟೇನರ್ ಬಳಿ ಗುರುವಾರ ಬೆಳಿಗ್ಗೆ ಸೈಕಲ್‌ನಲ್ಲಿ ತೆರಳುತ್ತಿದ್ದ ಮುಕ್ತಾರ್ ಅಹಮದ್ ಅವರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಯಲಹಂಕದ ದೊಡ್ಡಬೆಟ್ಟದ ಬಳಿ ಬುಧವಾರ ತಡರಾತ್ರಿ ಬೊಲೆರೊ ಜೀಪು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಅತ್ತೂರು ನಿವಾಸಿ ರಮೇಶ್ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಅಪಘಾತಕ್ಕೆ ಕಾರಣವಾದ ಚಾಲಕರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಮಹದೇವಪುರ ಹಾಗೂ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.