ಬೆಂಗಳೂರು: ಪ್ರಶಾಂತ್ ಲೇಔಟ್‌ನ ಪೇಯಿಂಗ್ ಗೆಸ್ಟ್‌ವೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನನ್ನು ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಛತ್ತೀಸಗಢದ ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ.
ನಗರದ ಐ.ಟಿ ಕಂಪನಿಯೊಂದರಲ್ಲಿ ಶುಭಾಂಶು ಶುಕ್ಲಾ ಕೆಲಸ ಮಾಡುತ್ತಿದ್ದ. ಪಿ.ಜಿಯಲ್ಲಿ ನೆಲಸಿದ್ದ. ಮೇ 9ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಪಿಜಿಯಲ್ಲಿದ್ದ ಯುವಕರು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಯಶಸ್ಸು ಕುರಿತು ಸಂಭ್ರಮಾಚರಣೆ ನಡೆಸುತ್ತಿದ್ದರು. ಆಗ ಬಾಲ್ಕನಿಯಲ್ಲಿ ನಿಂತಿದ್ದ ಶುಕ್ಲಾ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ಮೂಲಗಳು ಹೇಳಿವೆ.
ಆರೋಪಿ ಪಾಕ್ ಪರ ಘೋಷಣೆ ಕೂಗುತ್ತಿದ್ದ ದೃಶ್ಯವನ್ನು ಪಿ.ಜಿಯಲ್ಲಿ ನೆಲಸಿದ್ದ ಯುವಕನೊಬ್ಬ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ನಂತರ ಅಲ್ಲಿದ್ದ ಯುವಕರು, ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದರು. ಶುಭಾಂಶು ಶುಕ್ಲಾ ಪಾಕ್ ಪರ ಘೋಷಣೆ ಕೂಗಿದ್ದು ವಿಚಾರಣೆ ವೇಳೆ ದೃಢಪಟ್ಟಿತ್ತು. ಪ್ರಕರಣ ದಾಖಲಿಸಿಕೊಂಡು ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.