ಪೀಣ್ಯ ದಾಸರಹಳ್ಳಿ: ಹಾವನೂರು ಬಡಾವಣೆಯ ಸೌಂದರ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಮನ್ ಫಾತಿಮಾ ಅವರು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 592 (ಶೇ 98.66) ಅಂಕಗಳನ್ನು ಪಡೆದು ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.
ವಿಕಾಸ್ ಬಿ.ಆರ್. 591 (ಶೇ 98.5), ಪೂಜಾ ಎಂ., ಶಿಲ್ಪಾ ಎಸ್. ತಲಾ 590 (ಶೇ 98.33) ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೆ. ದೀಪಾಂಕರ್ ವಸಂತ್ 592 (ಶೇ 98.66) ಅಂಕಗಳನ್ನು ಗಳಿಸಿದ್ದಾರೆ. ಇಲ್ಲಿನ 225 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ ಪಡೆದಿದ್ದು, ಶೇ 98 ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ಮಹಾಬಲೇಶ್ವರ ತುಂಗ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.