ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆ ನೀಡದಿರುವುದು ಮತ್ತು ಈ ರೋಗಿಗಳಿಗಾಗಿ ಶೇ 50ರಷ್ಟು ಹಾಸಿಗೆಯನ್ನು ಮೀಸಲಿಡದಿರುವುದಕ್ಕೆ ಕಾರಣ ಕೇಳಿ, ಜಯನಗರದ ಅಪೊಲೊ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ನಗರದ ವಿಕ್ರಂ ಹಾಸ್ಪಿಟಲ್‌ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.
‘ಎಲ್ಲ ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು ಮತ್ತು ಆಸ್ಪತ್ರೆಯಲ್ಲಿ ಶೇ 50ರಷ್ಟು ಹಾಸಿಗೆ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಆದರೆ, ನೀವು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡಿಲ್ಲ ಎಂಬ ದೂರುಗಳು ಬಂದಿವೆ. ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ ಮತ್ತು ಕೆಪಿಎಂಇ ಕಾಯ್ದೆಗಳ ನಿಯಮ ಉಲ್ಲಂಘನೆ ಮಾಡಿದ್ದೀರಿ. ಈ ಕುರಿತು ಒಂದು ದಿನದೊಳಗೆ ಸಮಜಾಯಿಷಿ ನೀಡಬೇಕು. ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ನೋಟಿಸ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.