ADVERTISEMENT

ಇ-ಖಾತಾ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 15:43 IST
Last Updated 10 ಜನವರಿ 2025, 15:43 IST
<div class="paragraphs"><p>ಜಿ. ಜಗದೀಶ್‌</p></div>

ಜಿ. ಜಗದೀಶ್‌

   

ಬೆಂಗಳೂರು: ‘ಇ–ಖಾತಾ ಇಲ್ಲದೆ ಆಸ್ತಿ ನೋಂದಣಿಗೆ ಸಮಸ್ಯೆ ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಜಿಲ್ಲಾಧಿಕಾರಿ ಜಿ. ಜಗದೀಶ‌್ ಭರವಸೆ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‍, ಕಂದಾಯ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಬಿಲ್ಡರ್‌ಗಳು, ಡೆವಲಪರ್‌ಗಳು, ಸಾರ್ವಜನಿಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

ನಗರ ಜಿಲ್ಲಾ ವ್ಯಾಪ್ತಿಯ ಬಡಾವಣೆ, ಹೊಸ ಬಡಾವಣೆಗಳಲ್ಲಿರುವ ಆಸ್ತಿಗಳ ನೋಂದಣಿಗೆ ರೂಪುರೇಷೆ ಹಾಗೂ ಅಧಿಕೃತ ಬಡಾವಣೆಗಳಲ್ಲಿನ ಸ್ವತ್ತುಗಳಿಗೆ ಇ-ಖಾತಾ ಪಡೆಯುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

‘ಇ-ಖಾತಾ ಇಲ್ಲದೇ ನೋಂದಣಿ ಪ್ರಕ್ರಿಯೆ ಸಾಧ್ಯವಿಲ್ಲದ ಕಾರಣ ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಜನರು ಆಸ್ತಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಹುಡುಕಲು, ಅಗತ್ಯ ಸಲಹೆ ನೀಡಬಹುದು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಮಸ್ಯೆಗಳನ್ನೂ ಆಲಿಸಿದ ಜಿಲ್ಲಾಧಿಕಾರಿ, ಈ ಎಲ್ಲವನ್ನೂ ಸರ್ಕಾರದ ಗಮಕ್ಕೆ ತಂದು ಆದಷ್ಟು ಬೇಗ ಪರಿಹಾರ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ನಗರ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್.ಲತಾಕುಮಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.