ADVERTISEMENT

ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಿ: ಜಂಟಿ ಸಾರಿಗೆ ಆಯುಕ್ತ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 16:15 IST
Last Updated 13 ಆಗಸ್ಟ್ 2024, 16:15 IST
<div class="paragraphs"><p>&nbsp;ಸಾಂದರ್ಭಿಕ ಚಿತ್ರ</p></div>

 ಸಾಂದರ್ಭಿಕ ಚಿತ್ರ

   

ಬೆಂಗಳೂರು: ಚಾಲನಾ ಪರವಾನಗಿ ಇಲ್ಲದವರು ಮತ್ತು ಇತರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುವವರ ಮೇಲೆ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಗರ ವಿಭಾಗದ ಜಂಟಿ ಸಾರಿಗೆ ಆಯುಕ್ತ ನಿರ್ದೇಶನ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಚಾಲನಾ ಪರವಾನಗಿ ಇಲ್ಲದೆ, ಅತಿ ವೇಗವಾಗಿ ಮತ್ತು ನಿಯಮ ಉಲ್ಲಂಘಿಸಿ ಕಸದ ಲಾರಿಗಳನ್ನು ಚಲಾಯಿಸಿ ಚಾಲಕರು ಅಪಘಾತಕ್ಕೆ ಕಾರಣರಾಗುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ಮನವಿ ಮಾಡಿದ್ದರು.

ADVERTISEMENT

ಮುಖ್ಯಮಂತ್ರಿಗೆ ಸಲ್ಲಿಸಿದ್ದ ಈ ಮನವಿಯಲ್ಲಿರುವ ಅಂಶಗಳನ್ನು ಉಲ್ಲೇಖಿಸಿ ಬೆಂಗಳೂರಿನ ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ, ಉತ್ತರ, ಎಲೆಕ್ಟ್ರಾನಿಕ್‌ ಸಿಟಿ, ಕೆ.ಆರ್‌.ಪುರ, ಯಲಹಂಕ, ಚಂದಾಪುರ, ಜ್ಞಾನಭಾರತಿ, ಶಾಂತಿನಗರ ಮತ್ತು ದೇವನಹಳ್ಳಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಂಟಿ ಸಾರಿಗೆ ಆಯುಕ್ತರು ಈ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿ ವ್ಯಾಪ್ತಿಯಲ್ಲಿ ಸಂಚರಿಸುವ, ಬಿಬಿಎಂಪಿಗೆ ಸೇರಿದ ಎಲ್ಲ ವಾಹನಗಳು ಮತ್ತು ವಾಹನ ಚಾಲಕರನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಪರವಾನಗಿ ಇಲ್ಲದೆ ವಾಹನ ಚಲಾಯಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.