ADVERTISEMENT

ವಿಶ್ಲೇಷಣೆ ಸಹಿತ ಕ್ರಿಯಾ ಯೋಜನೆ ಅಗತ್ಯ: ಉಮಾ ಮಹದೇವನ್

​ಪ್ರಜಾವಾಣಿ ವಾರ್ತೆ
Published 14 ಮೇ 2025, 16:23 IST
Last Updated 14 ಮೇ 2025, 16:23 IST
ಉಮಾ ಮಹಾದೇವನ್‌
ಉಮಾ ಮಹಾದೇವನ್‌   

ಬೆಂಗಳೂರು: ಸೃಜನಶೀಲ ಶಕ್ತಿಯನ್ನು ಬಳಸಿಕೊಂಡು ಹವಾಮಾನ ಬದಲಾವಣೆಗೆ ಸಂಬಂಧಿತ ವಿಶ್ಲೇಷಿತ ವಿವರಗಳನ್ನೊಳಗೊಂಡ ಕ್ರಿಯಾ ಯೋಜನೆಯನ್ನು ರಚಿಸುವುದು ಅಗತ್ಯ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ತಿಳಿಸಿದರು.

ಪಾಲಿಕೆಯ ಹವಾಮಾನ ಕ್ರಿಯಾ ಕೋಶದ ವತಿಯಿಂದ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಬುಧವಾರ ಏರ್ಪಡಿಸಿದ್ದ ಲೇಖನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಾಗರಿಕರ ಪಾಲ್ಗೊಳ್ಳುವಿಕೆ, ಸ್ವಯಂಸೇವಾ ಚಟುವಟಿಕೆ ಹಾಗೂ ಪರ್ಯಾಯ ಶಿಕ್ಷಣದ ಕೇಂದ್ರವಾಗಿದೆ ಎಂದರು.

ADVERTISEMENT

ಬಿಬಿಎಂಪಿ ಆಡಳಿತಗಾರ ತುಷಾರ್ ಗಿರಿನಾಥ್ ಮಾತನಾಡಿ, ‘ಬೆಂಗಳೂರು ಹವಾಮಾನ ಬದಲಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ಹವಾಮಾನ ಕ್ರಿಯಾ ಯೋಜನೆಯನ್ನು ಪ್ರಕಟಿಸಲಾಗಿದೆ. ಅನೇಕ ಇಲಾಖೆಗಳು ಈ ಕ್ರಮಗಳನ್ನು ಅನುಷ್ಠಾನ ಮಾಡಬೇಕು’ ಎಂದು ಹೇಳಿದರು.

ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ಅಧ್ಯಕ್ಷೆ ಪ್ರೀತಿ ಗೆಹಲೋತ್‌ ಮಾತನಾಡಿ, ‘ಹವಾಮಾನ‌ ಕ್ರಿಯಾ ಕೋಶದೊಂದಿಗೆ ಜವಾಬ್ದಾರಿ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಹಕಾರಯುತ ವಾತಾವರಣ ನಿರ್ಮಿಸುವುದು ನಮ್ಮ ಉದ್ದೇಶ. ಸರ್ಕಾರದ ಜೊತೆ ನಾಗರಿಕರು ಕೈ ಜೋಡಿಸಿ ಏಕಮತವಾಗಿ ಕಾರ್ಯನಿರ್ವಹಿಸಿದರೆ, ನಮ್ಮ ಪ್ರಯತ್ನಗಳು ಪರಿಣಾಮಕಾರಿ ಕೊಡುಗೆಗಳನ್ನು ನೀಡಲು ಸಾಧ್ಯ’ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಭಾಶ್ ಚಂದ್ರ ರೇ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್, ಯೋಜನೆ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.