ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶದ 11 ಪ್ರಜೆಗಳನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕ್ಯಾಮರೂನ್ ಹಾಗೂ ಸುಡಾನ್ ದೇಶದ ನಾಲ್ವರನ್ನು ನೆಲಮಂಗಲ ಬಳಿಯ ವಲಸಿಗರ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ನೈಜೀರಿಯಾ ಹಾಗೂ ಸೆನೆಗಲ್ ದೇಶದ ಇಬ್ಬರ ಗಡಿಪಾರಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ನೈಜೀರಿಯಾ ಹಾಗೂ ಐವರಿ ಕೋಸ್ಟ್‌ನ ಐವರ ವಿರುದ್ಧ ಡಿ.ಜೆ.ಹಳ್ಳಿ, ಕುಮಾರಸ್ವಾಮಿ ಲೇಔಟ್, ಹೆಣ್ಣೂರು, ಬನಶಂಕರಿ ಹಾಗೂ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ನಿಗ್ರಹ ಕಾಯ್ದೆ(ಎನ್‌ಡಿಪಿಎಸ್) ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಅಕ್ರಮ ವಾಸಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.