ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಎಲ್ಲ ಆರೋಪಿಗಳನ್ನು ಕಾರಾಗೃಹದಿಂದಲೇ ವಿಡಿಯೊ ಕಾನ್ಪರೆನ್ಸ್ ಮೂಲಕ ಹಾಜರು ಪಡಿಸಲಾಯಿತು. ಆರೋಪಿಗಳಿಂದ ಕೆಲವು ಮಾಹಿತಿ ಪಡೆದ ನ್ಯಾಯಾಧೀಶರು, ಆಗಸ್ಟ್ 14ರ ವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.
ಈ ಹಿಂದೆ (ಜುಲೈ 18) ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಿದಾಗ ಆಗಸ್ಟ್ 1ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.
ಆರೋಪಿಗಳಾದ ದರ್ಶನ್, ಪವಿತ್ರಾಗೌಡ, ಪ್ರದೋಷ್, ವಿನಯ್ ಸೇರಿ ಎಲ್ಲ ಆರೋಪಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ, ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು. ದರ್ಶನ್ ಸೇರಿ 14 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ರವಿಶಂಕರ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಅವರನ್ನು ತುಮಕೂರು ಕಾರಾಗೃಹದಲ್ಲಿ ಇರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.