
ಪ್ರಜಾವಾಣಿ ವಾರ್ತೆ
ನಟ ಮಯೂರ್ ಪಟೇಲ್
ಬೆಂಗಳೂರು: ಮದ್ಯ ಸೇವಿಸಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಸರಣಿ ಅಪಘಾತ ನಡೆಸಿದ ನಟ ‘ಮಯೂರ್ ಪಟೇಲ್’ ವಿರುದ್ಧ ಇಲ್ಲಿನ ಹಲಸೂರು ಸಂಚಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ.
ಫಾರ್ಚ್ಯೂನರ್ ಕಾರನ್ನು ಮಯೂರು ಅವರು ಚಾಲನೆ ಮಾಡುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್ ಎಂಬುವರ ಕಾರುಗಳು ಹಾಗೂ ಸರ್ಕಾರಿ ವಾಹನ ಜಖಂ ಆಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹಲಸೂರು ಸಂಚಾರ ಠಾಣೆಯ ಪೊಲೀಸರು ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಯೂರು ಪಟೇಲ್ ಅವರು ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವುದು ದೃಢಪಟ್ಟಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.