ADVERTISEMENT

ನಟ ವಿನೋದ್‌ರಾಜ್ ಹೆಸರಿನಲ್ಲಿ ನಕಲಿ ಖಾತೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 16:25 IST
Last Updated 13 ನವೆಂಬರ್ 2020, 16:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ನಟ ವಿನೋದ್‌ ರಾಜ್ ಹೆಸರಿನಲ್ಲಿ ಫೇಸ್‌ಬುಕ್‌ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಕಲಿ ಖಾತೆ ಸಂಬಂಧ ವಿನೋದ್ ರಾಜ್ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಿನೋದ್‌ ರಾಜ್ ಅವರ ಹೆಸರಿಗೆ ಧಕ್ಕೆ ತರುವ ಉದ್ದೇಶದಿಂದಲೇ ನಕಲಿ ಖಾತೆ ತೆರೆಯಲಾಗಿದೆ. ಅಸಭ್ಯ ಬರಹಗಳಿರುವ ಅಶ್ಲೀಲ ಫೋಟೊಗಳನ್ನು ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ಈ ಸಂಗತಿ ದೂರಿನಲ್ಲಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.