ADVERTISEMENT

ಅದಾಲತ್‌ ಶುಲ್ಕ ವಾಪಸು: ನೋಟಿಸ್ ಜಾರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 19:28 IST
Last Updated 18 ಜುಲೈ 2019, 19:28 IST

ಬೆಂಗಳೂರು: ‘ಲೋಕ ಅದಾಲತ್‌ನಲ್ಲಿ ವಿಲೇವಾರಿ ಆದ ವ್ಯಾಜ್ಯಗಳ ಕೋರ್ಟ್ ಶುಲ್ಕವನ್ನು ಕಕ್ಷಿದಾರರಿಗೆ ವಾಪಸು ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಕೆ.ಎಸ್. ಪೆರಿಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿತು.

ಆಕ್ಷೇಪ ಏನು?: ‘ಕರ್ನಾಟಕ ಕೋರ್ಟ್ ಶುಲ್ಕ ಕಾಯ್ದೆ–1958ರ ಕಲಂ 66ರ ಪ್ರಕಾರ ಹಾಗೂ ಕಾನೂನು ಸೇವಾ ಪ್ರಾಧಿಕಾರದ ನಿಯಮಗಳ ಅನುಸಾರ ಕಕ್ಷಿದಾರರು ಲೋಕ ಅದಾಲತ್‌ನಲ್ಲಿ ವ್ಯಾಜ್ಯಗಳನ್ನು ಪರಿಹರಿಸಿಕೊಂಡರೆ ಅವರು ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ವಾಪಸು ನೀಡಬೇಕು. ಅನೇಕ ರಾಜ್ಯಗಳಲ್ಲಿ ಈ ನಿಯಮ ಜಾರಿಯಲ್ಲಿದೆ. ಆದರೆ ಕರ್ನಾಟಕದಲ್ಲಿ ಇಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.