ಬೆಂಗಳೂರು: ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟ್ರಸ್ಟ್ ನೀಡುವ ‘ಆದರ್ಶ ಜೈನ ಮಹಿಳಾರತ್ನ ಪ್ರಶಸ್ತಿ’ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಹಿರಿಯ ವಿಜ್ಞಾನಿ ಅನುರಾಧಾ ಬಿ. ದೇಸಾಯಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಅನುರಾಧ ಅವರು ‘ಚಂದ್ರಯಾನ-3’ ಯೋಜನೆಯ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕೆ.ಆರ್. ರಸ್ತೆಯಲ್ಲಿರುವ ಜೈನ ಭವನದಲ್ಲಿ ಅಕ್ಟೋಬರ್ 27ರಂದು ಮಧ್ಯಾಹ್ನ 2 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಪ್ರತಿಭಾ ಪುರಸ್ಕಾರವನ್ನೂ ಪ್ರದಾನ ಮಾಡಲಾಗುತ್ತದೆ ಎಂದು ಟ್ರಸ್ಟ್ ಅಧ್ಯಕ್ಷ ಎಸ್. ಜಿತೇಂದ್ರಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.