ADVERTISEMENT

ಬಿಎಂಟಿಸಿ ಸಿಬ್ಬಂದಿಗೆ ಹೆಚ್ಚುವರಿ ವೇತನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 19:52 IST
Last Updated 25 ಜನವರಿ 2023, 19:52 IST
   

ಬೆಂಗಳೂರು: ಸಾರ್ವತ್ರಿಕ ರಜೆ ಅಥವಾ ಹಬ್ಬದ ದಿನಗಳಲ್ಲಿ ಕರ್ತವ್ಯ ನಿರ್ವಹಿ ಸುವ ಸಿಬ್ಬಂದಿಗೆ ಹೆಚ್ಚುವರಿ ವೇತನ ಪಾವತಿಸಲು ಬಿಎಂಟಿಸಿ ನಿರ್ಧರಿಸಿದೆ.

2023ರ ಜನವರಿಯಿಂದ 2023ರ ಜೂನ್ ಅವಧಿಯಲ್ಲಿ ಬರುವ ರಜಾ ದಿನಗಳಂದು ಜನದಟ್ಟಣೆಗೆ ಅನುಗುಣವಾಗಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹೆಚ್ಚುವರಿ ವೇತನ ಪಾವತಿಸಲು ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಪದ್ಧತಿ ಮೊದಲೇ ಇತ್ತು ಅದನ್ನು ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು
ಸ್ಪಷ್ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT