ADVERTISEMENT

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 18:29 IST
Last Updated 14 ಮಾರ್ಚ್ 2021, 18:29 IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುನಿಕೃಷ್ಣಯ್ಯ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಮಚಂದ್ರ, ಮುನಿಮಾರಪ್ಪ, ನರಸಿಂಹಯ್ಯ, ಬಿ.ಎನ್.ಮಂಜುನಾಥ್, ಕೃಷ್ಣಮೂರ್ತಿ, ಮಾದೇಶ್, ಸತೀಶ್ ಕುಮಾರ್ ಇದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುನಿಕೃಷ್ಣಯ್ಯ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಮಚಂದ್ರ, ಮುನಿಮಾರಪ್ಪ, ನರಸಿಂಹಯ್ಯ, ಬಿ.ಎನ್.ಮಂಜುನಾಥ್, ಕೃಷ್ಣಮೂರ್ತಿ, ಮಾದೇಶ್, ಸತೀಶ್ ಕುಮಾರ್ ಇದ್ದರು.   

ಕೆ.ಆರ್‌.ಪುರ: ‘ಒಳ ಮೀಸಲಾತಿಗಾಗಿ ಎರಡು ದಶಕದಿಂದ ಹೋರಾಟ ನಡೆಯುತ್ತಿದೆ. ಆದರೆ ನಮ್ಮನ್ನು ಆಳುವ ಸರ್ಕಾರಗಳು ಮೀಸಲಾತಿ ನೀಡದೆ ವಂಚಿಸುತ್ತ ಬಂದಿವೆ’ ಎಂದು ಆದಿ ಜಾಂಬವ ಜನಸಂಘದ ರಾಜ್ಯ ಘಟಕದ ಅಧ್ಯಕ್ಷ ಮುನಿಕೃಷ್ಣಯ್ಯ ಹೇಳಿದರು.

ಮಹದೇವಪುರ ಕ್ಷೇತ್ರದ ಚೀಮಸಂದ್ರದಲ್ಲಿ ಆದಿ ಜಾಂಬವ ಜನಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.

‘ಮಾದಿಗ ಸಮುದಾಯ ಅರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಕಳೆದ 8ರಂದು ಎಂಟರಂದು ಚೈತನ್ಯ ರಥಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಸಚಿವ ಶ್ರೀರಾಮಲು ಹೋರಾಟದ ಸ್ಥಳಕ್ಕೆ ಬಂದು ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಭರವಸೆ ನೀಡಿದ್ದರು. ಈ ಭರವಸೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ’ ಎಂದರು.

ADVERTISEMENT

ಆದಿ ಜಾಂಬವ ಜನಸಂಘದ ಪೂರ್ವ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.