ADVERTISEMENT

ಆದಿಚುಂಚನಗಿರಿ ಮಠದಿಂದ ಕೋವಿಡ್ ಆರೈಕೆ ಕೇಂದ್ರ

​ಪ್ರಜಾವಾಣಿ ವಾರ್ತೆ
Published 9 ಮೇ 2021, 16:45 IST
Last Updated 9 ಮೇ 2021, 16:45 IST
ಆರೈಕೆ ಕೇಂದ್ರಕ್ಕೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಯೋಗಕ್ಷೇಮವನ್ನು ನಿರ್ಮಲಾನಂದನಾಥ ಸ್ವಾಮೀಜಿ ವಿಚಾರಿಸಿದರು
ಆರೈಕೆ ಕೇಂದ್ರಕ್ಕೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಯೋಗಕ್ಷೇಮವನ್ನು ನಿರ್ಮಲಾನಂದನಾಥ ಸ್ವಾಮೀಜಿ ವಿಚಾರಿಸಿದರು   

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ನಗರದ ವಿಜಯನಗರದ ಕಾಲಭೈರವೇಶ್ವರ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ.

ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸೌಮ್ಯನಾಥ ಸ್ವಾಮೀಜಿಯವರು ಈ ಕೇಂದ್ರವನ್ನು ಭಾನುವಾರ ಉದ್ಘಾಟಿಸಿದರು.

ಈ ಕೇಂದ್ರದಲ್ಲಿ ನುರಿತ ತಜ್ಞರಿದ್ದು ಸೋಂಕಿತರಿಗೆ ಪ್ರತಿದಿನ ತಪಾಸಣೆ ನಡೆಸಿ ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ. ಔಷಧಿ, ಹಾಸಿಗೆ ಕೂಡ ಇಲ್ಲಿ ಲಭ್ಯವಿರಲಿದೆ.

ADVERTISEMENT

ಸೋಂಕಿತರನ್ನು ಉಪಚರಿಸಲು ನುರಿತ ಸಹಾಯಕರು ಇರಲಿದ್ದು, ಪ್ರತಿದಿನ ಯೋಗ, ಪ್ರಾಣಾಯಾಮ ಸೇರಿದಂತೆ ಉತ್ತಮ ಆರೋಗ್ಯಕ್ಕೆ ಅಮೂಲ್ಯವಾದ ಸಲಹೆಗಳನ್ನು ನೀಡುವ ತಂಡ ಕಾರ್ಯನಿರ್ವಹಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.