ADVERTISEMENT

ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿದ್ದ ವಿಷಯವನ್ನು ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 7:57 IST
Last Updated 27 ನವೆಂಬರ್ 2020, 7:57 IST
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ   

ಬೆಂಗಳೂರು: ಲಿಂಗಾಯತ- ವೀರಶೈವ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂಬ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿದ್ದ ವಿಷಯವನ್ನು ಮುಂದೂಡಲಾಗಿದೆ.

ಆದ ಕಾರಣ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರದ್ದುಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಮೂಲಕ ಯಡಿಯೂರಪ್ಪ ಜತೆ ಮಾತನಾಡಿದ ಕಾರಣ ಲಿಂಗಾಯತ ಸಮುದಾಯ ವಿಷಯವನ್ನು ಮುಂದೂಡಲಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿ, ಲಿಂಗಾಯತರಲ್ಲಿ ಕೆಲವು ಉಪಜಾತಿಗಳಲ್ಲದೆ, ಒಕ್ಕಲಿಗರಲ್ಲೂ ಕೆಲವು ಜಾತಿಗಳು ಸೇರಿಸಬೇಕಾಗಿದೆ. ಹೀಗಾಗಿ ಸಮಗ್ರವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ. ಆದ್ದರಿಂದ ವಿಷಯ ಮುಂದೂಡಲಾಗಿದೆ ಎಂದು ಹೇಳಿದರು.

ಕೇಂದ್ರದ ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿ ಉದ್ದೇಶಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.