ADVERTISEMENT

‘ಏರೊ ಇಂಡಿಯಾ’ ವೈಮಾನಿಕ ಪ್ರದರ್ಶನ ಫೆ. 13ರಿಂದ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 19:10 IST
Last Updated 27 ನವೆಂಬರ್ 2022, 19:10 IST
   

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ 2023ರ ಫೆ. 13ರಿಂದ 17ರವರೆಗೆ ‘ಏರೊ ಇಂಡಿಯಾ ವೈಮಾನಿಕ ಪ್ರದರ್ಶನ–2023’ ನಡೆಯಲಿದೆ.

‘ಏಷ್ಯಾದ ಅತೀ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶ–ವಿದೇಶದ ಕಂಪನಿಗಳ ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ’ ಎಂದು ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪನ್ನಗಳ ತಯಾರಿಕಾ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದೆ.

1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಯಲಹಂಕದ ವಾಯುನೆಲೆಯಲ್ಲಿ ಈ ಪ್ರದರ್ಶನ ನಡೆಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.