ಬೆಂಗಳೂರು: ಬೆಂಗಳೂರಿನಲ್ಲಿ 1996ರಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ವೈಮಾನಿಕ ಪ್ರದರ್ಶನ ಆಯೋಜಿಸಲಾಗುತ್ತಿದೆ. 14 ಆವೃತ್ತಿಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.
ಹಿಂದಿನ ಆವೃತ್ತಿಗಳು 7 ಲಕ್ಷಕ್ಕೂ ಅಧಿಕ ವೀಕ್ಷಕಕರು, 98 ದೇಶಗಳ ಗಣ್ಯರು ಮತ್ತು ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್‌ಎಂಇಗಳು ಸೇರಿ 809ಕ್ಕೂ ಅಧಿಕ ಪ್ರದರ್ಶಕರನ್ನು ಆಕರ್ಷಿಸಿದ್ದವು. 201 ಒಡಂಬಡಿಕೆಗಳಿಗೆ ಸಹಿ, ಪ್ರಮುಖ ಘೋಷಣೆ, ಉತ್ಪನ್ನ ಬಿಡುಗಡೆ, ₹75 ಸಾವಿರ ಕೋಟಿಗೂ ಅಧಿಕ ಮೌಲ್ಯದ ತಂತ್ರಜ್ಞಾನ ವರ್ಗಾವಣೆಗಳು ನಡೆದಿದ್ದವು. 250 ಪಾಲುದಾರಿಕೆಗಳಿಗೆ ಸಾಕ್ಷಿಯಾಗಿದ್ದವು.
15ನೇ ಆವೃತ್ತಿಯು ಇದನ್ನು ಮೀರಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ. ವೈಮಾನಿಕ ಪ್ರದರ್ಶನದ ವ್ಯಾಪ್ತಿ ಮತ್ತು ವೈಭವ ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಧ್ಯಮ ಮಾಹಿತಿ ಬ್ಯೂರೊ (ಡಿಫೆನ್ಸ್ ವಿಂಗ್) ವಿಶ್ವಾಸ ವ್ಯಕ್ತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.