ADVERTISEMENT

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಸಂಚಾರ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2025, 16:40 IST
Last Updated 5 ಫೆಬ್ರುವರಿ 2025, 16:40 IST
   

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಫೆಬ್ರುವರಿ 11ರಿಂದ 14ರವರೆಗೆ ಹಲವು ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

‘ಪ್ರಧಾನ ಮಂತ್ರಿ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಗಣ್ಯರು, ರಕ್ಷಣಾ ಪಡೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಾರ್ವಜನಿಕರು ಹಾಗೂ ತುರ್ತು ಸೇವಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೆಲ್ಲರ ಅನುಕೂಲಕ್ಕಾಗಿ ನಿತ್ಯವೂ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲವು ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ’ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

‘ನಿರ್ಬಂಧಿತ ರಸ್ತೆಗಳಲ್ಲಿ ಲಾರಿ, ಟ್ರಕ್, ಖಾಸಗಿ ಬಸ್‌ಗಳು, ಸರಕು ಸಾಗಣೆ ವಾಹನಗಳು ಹಾಗೂ ಟ್ರ್ಯಾಕ್ಟರ್‌ಗಳು ಸಂಚರಿಸುವಂತಿಲ್ಲ. ನಿಯಮ ಮೀರಿದರೆ, ಪ್ರಕರಣ ದಾಖಲಿಸಲಾಗುವುದು’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.