ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತರಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯ ಮಟ್ಟದ ಪ್ರಶಸ್ತಿಗಳು: ಎಚ್.ಡಿ.ದೇವೇಗೌಡ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ, ಸಿ.ಬೈರೇಗೌಡ ಪ್ರಶಸ್ತಿ, ಡಾ.ಎಂ.ಎಚ್.ಮರಿಗೌಡ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ/ರೈತ ಮಹಿಳೆ ಪ್ರಶಸ್ತಿ, ಡಾ.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ.
ಜಿಲ್ಲಾ ಮಟ್ಟದ ಪ್ರಶಸ್ತಿಗಳು: ಅತ್ಯುತ್ತಮ ರೈತ ಪ್ರಶಸ್ತಿ, ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ.
ತಾಲ್ಲೂಕು ಮಟ್ಟದ ಪ್ರಶಸ್ತಿಗಳು: ಅತ್ಯುತ್ತಮ ಯುವ ರೈತ ಪ್ರಶಸ್ತಿ, ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ.
ಅರ್ಜಿಗಳನ್ನು ಜುಲೈ 31ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 080: 23418883.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.