
ಬೆಂಗಳೂರು: ಕೃಷಿ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸುವ ಮತ್ತು ರೈತರನ್ನು ಉದ್ಯಮಿಗಳನ್ನಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಕಬ್ಬನ್ ಉದ್ಯಾನದಲ್ಲಿ ಆಯೋಜಿಸಿದ್ದ ‘ಅಗ್ರಿವಾಕ್’ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕಬ್ಬನ್ ಉದ್ಯಾನದ ಬ್ಯಾಂಡ್‌ಸ್ಟ್ಯಾಂಡ್ ಬಳಿ ನಡಿಗೆಗೆ ಚಾಲನೆ ನೀಡಿದರು. ಕ್ವೀನ್ಸ್ ರಸ್ತೆ, ವಿಧಾನಸೌಧ, ಯುಬಿ ಸಿಟಿ ಸಿಗ್ನಲ್ ಮತ್ತು ವಿಠಲ್ ಮಲ್ಯ ರಸ್ತೆಯ ಮೂಲಕ ಕ್ರಮಿಸಿ ಬ್ಯಾಂಡ್‌ಸ್ಟ್ಯಾಂಡ್‌ನಲ್ಲಿ ನಡಿಗೆ ಮುಕ್ತಾಯವಾಯಿತು. ನಡಿಗೆಗೂ ಮೊದಲು ಜುಂಬಾ ನೃತ್ಯ ಆಯೋಜಿಸಲಾಗಿತ್ತು.
‘ಫೆ.6ರಿಂದ 8ರವರೆಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ವ್ಯಾಪಾರ ಮೇಳದ ಪೂರ್ವಭಾವಿಯಾಗಿ ಈ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ರೈತರ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವುದು ಈ ನಡಿಗೆಯ ಉದ್ಧೇಶವಾಗಿತ್ತು’ ಎಂದು ಚಲುವರಾಯಸ್ವಾಮಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.