ADVERTISEMENT

ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 16:04 IST
Last Updated 9 ಅಕ್ಟೋಬರ್ 2025, 16:04 IST
ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಸಹಿ ಸಂಗ್ರಹ ಅಭಿಯಾನ ನಡೆಯಿತು. 
ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಸಹಿ ಸಂಗ್ರಹ ಅಭಿಯಾನ ನಡೆಯಿತು.     

ಕೆ.ಆರ್.ಪುರ: ಮತ ಕಳ್ಳತನದಿಂದ ದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಎನ್.ಡಿ.ಎ ನೇತೃತ್ವದ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ದೇಶದಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ತ ಹೇಳಿದರು.

ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಮುಂದೆ ಮತ ಕಳ್ಳತನ ವಿರೋಧಿಸಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನರೇಂದ್ರ ಮೋದಿ ಅವರು 11 ವರ್ಷಗಳಿಂದ ಪ್ರಧಾನ ಮಂತ್ರಿ ಹುದ್ದೆಗೆ ಆಯ್ಕೆ ಆಗುತ್ತಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಪ್ರತಿ ಚುನಾವಣೆಯಲ್ಲಿ ಮತ ಕಳ್ಳತನ ಮೂಲಕ ಚುನಾವಣೆಯಲ್ಲಿ ಗೆದ್ದು ಅಕ್ರಮವಾಗಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಸುಮಾರು ಐದು ಕೋಟಿ ಕಾರ್ಯಕರ್ತರ ಸಹಿ ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯದ 224 ಕ್ಷೇತ್ರದಲ್ಲಿ ಅಭಿಯಾನ ನಡೆಯುತ್ತಿದೆ’ ಎಂದರು. 

ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ಡಿ.ಕೆ.ಮೋಹನ್ ಬಾಬು, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಕೆಪಿಸಿಸಿ ಕೇಂದ್ರ ಜಿಲ್ಲಾಧ್ಯಕ್ಷ ನಂದಕುಮಾರ್, ವಿಧಾನ ಪರಿಷತ್  ಮಾಜಿ ಸದಸ್ಯ ನಾರಾಯಣಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.