ADVERTISEMENT

ಅನುದಾನಿತ ಕಾಲೇಜು: ಜೂನ್‌ ವೇತನ ಇಲ್ಲ

ಅಧಿವೇಶನದಲ್ಲಿ ಬಜೆಟ್‌ಗೆ ಇನ್ನೂ ಸಿಕ್ಕಿಲ್ಲ ಅನುಮತಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 19:18 IST
Last Updated 20 ಜುಲೈ 2019, 19:18 IST

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಬಜೆಟ್‌ಗೆ ಅನುಮೋದನೆ ಸಿಗದೆ ಇರುವುದರ ನೇರ ಪರಿಣಾಮ ಗೋಚರವಾಗಿದ್ದು, ಅನುದಾನಿತಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಜೂನ್‌ ತಿಂಗಳ ಸಂಬಳವೇ ಸಿಕ್ಕಿಲ್ಲ.

‘ಆರ್ಥಿಕ ಇಲಾಖೆಯಿಂದ 2ನೇ ತ್ರೈಮಾಸಿಕ ಕಂತಿನ ಹಣ ಬಿಡುಗಡೆ ಆಗದ ಕಾರಣ ಈ ತೊಂದರೆ ಉಂಟಾಗಿದೆ. ಅಧಿವೇಶನದಲ್ಲಿ ಬಜೆಟ್‌ಗೆ ಅನುಮತಿ ಸಿಕ್ಕಿದ ನಂತರ ಹಣ ಬಿಡುಗಡೆ ಮಾಡುತ್ತೇವೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT