
ಬೆಂಗಳೂರು: ನೀಟ್ ಪಿಜಿ 2025ರ ಕಟ್–ಆಫ್ ಅಂಕಗಳನ್ನು ಇಳಿಸಿರುವ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕ್ರಮವನ್ನು ಎಐಡಿಎಸ್‌ಒ ಖಂಡಿಸಿದೆ.
‘ಈ ಕ್ರಮ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ನಿರ್ವಹಿಸುವಲ್ಲಿ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅರ್ಹತಾ ಮಾನದಂಡ ಸಡಿಲಗೊಳಿಸಿರುವುದು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲವಾಗಿಸಲಿದೆ. ಭವಿಷ್ಯದಲ್ಲಿ ಆರೋಗ್ಯ ವ್ಯವಸ್ಥೆಯ ಗುಣಮಟ್ಟ ಕುಂದಿಸಲಿದೆ’ ಎಂದು ಸಂಘಟನೆ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.
‘ಅಸಮರ್ಪಕವಾಗಿ ಸ್ನಾತಕೋತ್ತರ ಸೀಟುಗಳ ಹಂಚಿಕೆ, ಶೈಕ್ಷಣಿಕ ಮೂಲಸೌಕರ್ಯಗಳ ಕೊರತೆ, ಕೌನ್ಸೆಲಿಂಗ್ ವಿಳಂಬ ಮುಂತಾದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವ ಬದಲು, ಸರ್ಕಾರ ಅರ್ಹತಾ ಮಾನದಂಡಗಳನ್ನೇ ದುರ್ಬಲಗೊಳಿಸಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಸಾರ್ವಜನಿಕ ಆರೋಗ್ಯದ ಮೇಲೆ ನೇರ ಪರಿಣಾಮ ಬೀರಲಿದ್ದು, ಅರ್ಹತಾ ಮಾನದಂಡಗಳಲ್ಲಿ ರಾಜಿ ಮಾಡಿಕೊಳ್ಳುವುದು ಸರಿಯಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.