ಶಾಲೆಗಳಿಗೆ ರಜೆ
Credit: iStock Photo
ಬೆಂಗಳೂರು: ‘ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ನೆಪದಲ್ಲಿ ಶಾಲೆಗಳ ರಜೆ ವಿಸ್ತರಣೆಯ ಆದೇಶವನ್ನು ಹಿಂಪಡೆದು ಸಮೀಕ್ಷೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ’ ಎಂದು ಎಐಡಿಎಒ ರಾಜ್ಯ ಸಮಿತಿ ಆಗ್ರಹಿಸಿದೆ.
‘ಈಗಾಗಲೇ ಶಾಲಾ ಶಿಕ್ಷಕರು ಬೋಧನೆ ಮಾಡುವ ಜೊತೆಗೆ ಬೋಧಕೇತರ ಚಟುವಟಿಕೆಗಳನ್ನು ನಿರ್ವಹಿಸುವ ಸ್ಥಿತಿಯಿದೆ. ಸಮೀಕ್ಷೆಯ ಜವಾಬ್ದಾರಿಯು ಹೊರೆಯಾಗಲಿದೆ ಎಂದು ಶಿಕ್ಷಕರೇ ಹೇಳುತ್ತಿದ್ದಾರೆ. ಪಾಠಗಳನ್ನು ಪೂರ್ಣಗೊಳಿಸುವ ಒತ್ತಡಕ್ಕೆ ಶಿಕ್ಷಕರು ಸಿಲುಕಿರುವ ಜತೆಗೆ ಮಕ್ಕಳ ಶೈಕ್ಷಣಿಕ ಸ್ಥಿರತೆ ಹಾಳು ಮಾಡುವ ಸನ್ನಿವೇಶ ಸೃಷ್ಟಿಯಾಗಲಿದೆ’ ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.
‘ಬೋಧನೆ ಮತ್ತು ಕಲಿಕೆಯ ಕಾರ್ಯಕ್ಕೆ ತೊಂದರೆಯಾಗದಂತೆ ಪೂರಕ ಯೋಜನೆಯಿಲ್ಲದೆ, ಚರ್ಚೆಯನ್ನೂ ಮಾಡದೇ ಶಾಲೆಗಳಿಗೆ ಏಕಾಏಕಿ ರಜೆ ವಿಸ್ತರಿಸಿರುವುದರಿಂದ ಫಲಿತಾಂಶ ಕುಸಿಯುವ ಭೀತಿ ಉಂಟಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.