ADVERTISEMENT

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ಮೋದಿ ಸೆಲ್ಫಿ ಪಾಯಿಂಟ್‌ಗೆ AIDSO ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2023, 19:41 IST
Last Updated 3 ಡಿಸೆಂಬರ್ 2023, 19:41 IST
<div class="paragraphs"><p>ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಯುಜಿಸಿ ಸೂಚನೆ ನೀಡಿರುವುದಕ್ಕೆ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಷನ್‌ (ಎಐಡಿಎಸ್ಓ) ಆಕ್ಷೇಪ ವ್ಯಕ್ತಪಡಿಸಿದೆ.

‘ಆಡಳಿತ ಪಕ್ಷದ ನಾಯಕರನ್ನು ಬಿಂಬಿಸುವ ಯುಜಿಸಿಯ ಸೂಚನೆಯು ಅಪ್ರಜಾತಾಂತ್ರಿಕವಾಗಿದೆ. ದೇಶದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದರ ಬದಲು, ಒಬ್ಬ ನಾಯಕನ ವ್ಯಕ್ತಿ ಪೂಜೆ, ಒಂದು ವಿಚಾರಧಾರೆ, ಸೇರಿದಂತೆ ಏಕಮುಖ ಚಿಂತನೆಯಲ್ಲಿ ದೇಶದ ವಿದ್ಯಾರ್ಥಿಗಳನ್ನು ಮುಳುಗಿಸುವ ಅಪಾಯಕಾರಿ ನಡೆಯಾಗಿದೆ. ಇದರ ಬದಲಾಗಿ, ಶಿಕ್ಷಣದ ವ್ಯಾಪಾರಿಕರಣ, ಖಾಸಗಿಕರಣ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮುಚ್ಚುವಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯುಜಿಸಿಯು ಕಾರ್ಯಪ್ರವೃತ್ತವಾಗಬೇಕು’ ಎಂದು ಆರ್ಗನೈಸೇಷನ್‌ನ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.