ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅಪರಾಧಗಳ ವಿರುದ್ದ ಹೋರಾಟ ನಡೆಸಲು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ(ಎಐಎಂಎಸ್‌ಎಸ್) ನಗರದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಹಿಳೆಯರ ಮೇಲಿನ ದೌರ್ಜನ್ಯ ಹತ್ತಿಕ್ಕುವ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಸಮಿತಿಯು
ಬಹುಮಹಡಿ ಕಟ್ಟಡ ಹತ್ತಿರ ಮಹಾನ್ ವ್ಯಕ್ತಿಗಳ ಸೂಕ್ತಿ ಪ್ರದರ್ಶನದೊಂದಿಗೆ ಅಭಿಯಾನ ಆರಂಭವಾಯಿತು.
ಮಹಿಳೆಯರು ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅಶ್ಲೀಲ ಸಿನಿಮಾ-ಸಾಹಿತ್ಯ, ಜಾಹೀರಾತು, ವೆಬ್‌ಸೈಟ್, ಮದ್ಯ-ಮಾದಕ ವಸ್ತುಗಳನ್ನು ನಿಷೇಧಿಸಬೇಕು ಎನ್ನುವ ಹಕ್ಕೊತ್ತಾಯದೊಂದಿಗೆ ಸಹಿ ಸಂಗ್ರಹ ಆರಂಭಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ನಿರ್ಮಲ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.