
ಏರ್ ಇಂಡಿಯಾ ಎಕ್ಸ್‌ಪ್ರೆಸ್
ದೇವನಹಳ್ಳಿ: ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಎರಡನೇ ಬಾರಿಯೂ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಮತ್ತೆ ವಾಪಸ್ ಬಂದಿದೆ.
ಇದರಿಂದ ರೊಚ್ಚಿಗೆದ್ದ ಪ್ರಯಾಣಿಕರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಬುಧವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ಹಾರಿದ್ದ ವಿಮಾನ ದಟ್ಟ ಮಂಜು ಕವಿದು ರನ್ ವೇ ಗೋಚರಿಸದ ಕಾರಣ 11 ತಾಸು ಆಗಸದಲ್ಲಿಯೇ ಹಾರಾಡಿ ಬೆಂಗಳೂರಿಗೆ ವಾಪಸ್ ಬಂದಿತ್ತು. ಅದಕ್ಕೂ ಮೊದಲು ಗೋರಖಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.
ಶನಿವಾರ ಮತ್ತೆ ಅದೇ ವಿಮಾನ ಬೆಳಗ್ಗೆ ಕಠ್ಮಂಡುವಿಗೆ ಹೊರಟಿತು. ಆದರೆ ಈ ಬಾರಿಯೂ ಅದು ಕಠ್ಮಂಡುವಿನಲ್ಲಿ ಇಳಿಯಲು ಸಾಧ್ಯವಾಗದೆ ಲಖನೌ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಬಳಿಕ ಪ್ರಯಾಣಿಕರನ್ನು ಹಲವಾರು ತಾಸು ವಿಮಾನದ ಒಳಗೆ ಕೂರಿಸಲಾಗಿತ್ತು. ಈ ವೇಳೆ ಪ್ರಯಾಣಿಕರಿಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.