ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬಾಗಲೂರು ಕ್ರಾಸ್‌ನಲ್ಲಿ ಖಾಸಗಿ ಬಸ್ ಹಾಗೂ ಕ್ಯಾಬ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವಿಮಾನಯಾನ ಸಂಸ್ಥೆಯ ಉದ್ಯೋಗಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ತಮಿಳುನಾಡಿನ ಮಧುರೈ ನಿವಾಸಿ ಸ್ನೇಹಾ ಕುಮಾರಿ(24) ಮೃತಪಟ್ಟವರು. ಇವರ ಸಹೋದ್ಯೋಗಿ ಕೌಸರ್ ಖಾನಂ(21) ಮತ್ತು ಕ್ಯಾಬ್ ಚಾಲಕ ವಿನಯ್(28) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.
ಸ್ನೇಹಾ ಕುಮಾರಿ ಅವರು ವಿಮಾನಯಾನ ಸಂಸ್ಥೆಯೊಂದರ ಗ್ರಾಹಕರ ಸೇವಾ ಕೇಂದ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಮುಂಜಾನೆ ಬಾಗಲೂರು ಕ್ರಾಸ್ ಕಡೆಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಕ್ಯಾಬ್‌ನಲ್ಲಿ ತೆರಳುತ್ತಿದ್ದರು. ಆಗ ಖಾಸಗಿ ಬಸ್ ಹಾಗೂ ಕ್ಯಾಬ್ ಮಧ್ಯೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.
ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.