ಬೆಂಗಳೂರು: ಏರ್‌ಲೈನ್ಸ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿದ್ದ ವ್ಯಕ್ತಿಯೊಬ್ಬ ನಗರದ ನಿವಾಸಿ ವರ್ಷನ್ ಎಂಬುವರಿಂದ ₹ 24 ಸಾವಿರ ಪಡೆದು ವಂಚಿಸಿದ್ದಾನೆ.
ಈ ಸಂಬಂಧ ಬೊಮ್ಮನಹಳ್ಳಿ ನಿವಾಸಿ ವರ್ಷನ್ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
‘ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ವರ್ಷನ್, ಉದ್ಯೋಗದ ಹುಡುಕಾಟದಲ್ಲಿದ್ದರು. ಜಾಲತಾಣವೊಂದರಲ್ಲಿ ಸ್ವ–ವಿವರ ಅಪ್‌ಲೋಡ್ ಮಾಡಿದ್ದರು. ಅದರಲ್ಲಿರುವ ಮಾಹಿತಿ ತಿಳಿದುಕೊಂಡು ಕರೆ ಮಾಡಿದ್ದ ಖಾಜಲ್ ಸಿಂಗ್ ಎಂಬಾತ, ಏರ್‌ಲೈನ್ಸ್ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಶುಲ್ಕ ಹಾಗೂ ತರಬೇತಿಗೆಂದು ₹ 24 ಸಾವಿರ ಪಡೆದು ವಂಚಿಸಿದ್ದಾನೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.