ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ‘ವಾಯು ವಜ್ರ’ ಬಸ್‌ಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವತಾರ್ ತಂತ್ರಾಶದಲ್ಲಿ ಬಿಎಂಟಿಸಿ ಅವಕಾಶ ಕಲ್ಪಿಸಿದೆ.
ನಗರದ ವಿವಿಧೆಡೆಯಿಂದ ವಿಮಾನ ನಿಲ್ದಾಣಕ್ಕೆ 164 ಮಾರ್ಗ ಮತ್ತು ವಿಮಾನ ನಿಲ್ದಾಣದಿಂದ ನಗರದ ವಿವಿಧೆಡೆ 171 ಮಾರ್ಗಗಳಲ್ಲಿ ಹವಾನಿಯಂತ್ರಿತ ‘ವಾಯುವಜ್ರ’ ಬಸ್‌ಗಳು ಕಾರ್ಯಾಚರಣೆಗೊಳ್ಳುತ್ತಿವೆ.
ಎಚ್‌ಎಎಲ್, ವೈಟ್‌ಫೀಲ್ಡ್ ಟಿಟಿಎಂಸಿ, ಕಾಡುಗೋಡಿ ಬಸ್ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಡಿಎಲ್‌ಎಫ್ ಅಪಾರ್ಟ್‌ಮೆಂಟ್ ಸಮುಚ್ಚಯ ಪ್ರದೇಶಗಳಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವ ಬಸ್‌ಗಳಲ್ಲಿ ಆಸನ ಕಾಯ್ದಿರಿಸಬಹುದು.
ಒಂದೇ ಗುಂಪಿನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಕಾಯ್ದಿರಿಸಿದರೆ ಶೇ 5ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಮ್ಮೆಲೇ ಆಸನ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣಕ್ಕೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ.
ಕೆಎಸ್‌ಆರ್‌ಟಿಸಿ ಬುಕ್ಕಿಂಗ್ ಕೌಂಟರ್, ಆನ್‌ಲೈನ್(www.ksrtc.in), ಕೆಎಸ್‌ಆರ್‌ಟಿಸಿ ಮೊಬೈಲ್ ಆ್ಯಪ್ ಮತ್ತು ಅಧಿಕೃತ ಏಜೆನ್ಸಿಗಳ ಮೂಲಕವೂ ಕಾಯ್ದಿರಿಸಬಹುದು. ಆನ್‌ಲೈನ್ ಮತ್ತು ಮೊಬೈಲ್ ಆ್ಯಪ್ ಮೂಲಕ ಆಸನ ಕಾಯ್ದಿರಿಸುವವರು ಪ್ರಯಾಣದ ಸಮಯದಲ್ಲಿ ಭಾವಚಿತ್ರ ಸಹಿತ ಗುರುತಿನ ಚೀಟಿ ತೋರಿಸಬೇಕು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.