ADVERTISEMENT

ಕೆಐಎ: 1.12 ಕೆ.ಜಿ ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2019, 19:58 IST
Last Updated 13 ಮಾರ್ಚ್ 2019, 19:58 IST
ಉತ್ತರ ಪ್ರದೇಶದ ಪ್ರಯಾಣಿಕನ ಬಳಿ ದೊರೆತ ಚಿನ್ನದ ಗಟ್ಟಿ
ಉತ್ತರ ಪ್ರದೇಶದ ಪ್ರಯಾಣಿಕನ ಬಳಿ ದೊರೆತ ಚಿನ್ನದ ಗಟ್ಟಿ   

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಎಐ) ಮೂಲಕ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಅವರಿಂದ 1.12 ಕೆ.ಜಿ ಚಿನ್ನ ಜಪ್ತಿ ಮಾಡಿದ್ದಾರೆ.

‘ಮಂಗಳೂರಿನ ನಿವಾಸಿಯಾದ 22 ವರ್ಷದ ಯುವಕ, ಒಳ ಉಡುಪಿನಲ್ಲಿ 553 ಗ್ರಾಂ ಚಿನ್ನವನ್ನು ಬಚ್ಚಿಟ್ಟುಕೊಂಡು ಬಂದಿದ್ದ. ಆತನ ವರ್ತನೆಯಿಂದ ಅನುಮಾನಗೊಂಡ ಸಿಬ್ಬಂದಿ, ಪರಿಶೀಲನೆ ನಡೆಸಿದಾಗ ಚಿನ್ನ ಪತ್ತೆಯಾಯಿತು’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಇನ್ನೊಂದು ಪ್ರಕರಣದಲ್ಲಿ ಸೌದಿ ಅರೇಬಿಯಾದಿಂದ ನಗರಕ್ಕೆ ಬಂದಿಳಿದಿದ್ದ ಉತ್ತರ ಪ್ರದೇಶದ 50 ವರ್ಷದ ವ್ಯಕ್ತಿಯ ಬ್ಯಾಗ್‌ನಲ್ಲಿ 566 ಗ್ರಾಂ ಚಿನ್ನ ಸಿಕ್ಕಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.