ADVERTISEMENT

ಗುಪ್ತಾಂಗದಲ್ಲಿ ಚಿನ್ನದ ಬಿಸ್ಕತ್‌ ಸಾಗಣೆ ಪತ್ತೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2018, 19:53 IST
Last Updated 30 ಡಿಸೆಂಬರ್ 2018, 19:53 IST

ಬೆಂಗಳೂರು: ಗುಪ್ತಾಂಗದಲ್ಲಿ ಚಿನ್ನದ ಬಿಸ್ಕತ್‌ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು, 1.3 ಕೆ.ಜಿ ತೂಕದ ಚಿನ್ನ ಜಪ್ತಿ ಮಾಡಿದ್ದಾರೆ.

‘ದುಬೈನಿಂದ ವಿಮಾನದಲ್ಲಿ ನಗರದ ನಿಲ್ದಾಣಕ್ಕೆ ಬಂದಿಳಿದಿದ್ದ ಸುಡಾನ್ ದೇಶದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಣೆ ಬಗ್ಗೆ ಅನುಮಾನ ಬಂದಿತ್ತು. ಹೆಚ್ಚಿನ ವಿಚಾರಣೆ ನಡೆಸಿದಾಗ ಗುಪ್ತಾಂಗದಲ್ಲಿ ಚಿನ್ನದ ಬಿಸ್ಕತ್‌ಗಳಿರುವುದು ಪತ್ತೆಯಾಯಿತು’ ಎಂದು ಮೂಲಗಳು ತಿಳಿಸಿವೆ.

ಚಡ್ಡಿಯಲ್ಲಿ ಚಿನ್ನ: ಜರ್ಮನ್ ದೇಶದ ಪಾಸ್‌ಪೋರ್ಟ್‌ ಹೊಂದಿದ್ದ ವ್ಯಕ್ತಿಯೊಬ್ಬ, ತನ್ನ ಚಡ್ಡಿಯಲ್ಲಿ ಚಿನ್ನದ ಬಿಸ್ಕತ್‌ಗಳನ್ನು ಇಟ್ಟುಕೊಂಡಿದ್ದ. ಆತನನ್ನು ವಶಕ್ಕೆ ಪಡೆದ ಅಧಿಕಾರಿಗಳು, 1.4 ಕೆ.ಜಿ ಚಿನ್ನ ಜಪ್ತಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.