ADVERTISEMENT

ಆನ್‍ಲೈನ್ ಶಿಕ್ಷಣ: ಶಿಕ್ಷಣ ಉಳಿಸಿ ಸಮಿತಿ ಖಂಡನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 20:02 IST
Last Updated 14 ಜುಲೈ 2020, 20:02 IST

ಬೆಂಗಳೂರು: ರಾಜ್ಯದಲ್ಲಿ ಆನ್‍ಲೈನ್ ಶಿಕ್ಷಣ ನಡೆಸಲು ತಜ್ಞರ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ತಿರಸ್ಕರಿಸುವಂತೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‍ಇಸಿ) ಆಗ್ರಹಿಸಿದೆ.

'ಎಷ್ಟೋ ವಿದ್ಯಾರ್ಥಿಗಳು ಇಂಟರ್ನೆಟ್, ಮೊಬೈಲ್, ಕಂಪ್ಯೂಟರ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ತಾರತಮ್ಯದಿಂದ ಕೂಡಿರುವ ಆನ್‍ಲೈನ್ ಶಿಕ್ಷಣ ಶ್ರೀಮಂತರ ಪರವಾಗಿದೆ' ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT